ಪ್ರತಿಭಾ ಕಾರಂಜಿ,ಜಿಲ್ಲಾ ಮಟ್ಟಕ್ಕೆ ಆಯ್ಕೆ

379
rtmp://telugusolutions.com:1935/nammurutv/nammurutv

ಬಳ್ಳಾರಿ/ ಹೊಸಪೇಟೆ:ನಗರದಲ್ಲಿ ಇತ್ತೀಚೆಗೆ ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಕಸ್ತೂರಬಾ ಗಾಂಧಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅಂಬಿಕಾ ಹಾಗೂ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ ಪ‌ಡೆದ ವಿದ್ಯಾಲಯದ ಪ್ರತಿಭಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಅದೇ ರೀತಿ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಛದ್ಮವೇಷದಲ್ಲಿ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿನಿ ಎಂ.ಪವಿತ್ರಾ ದ್ವಿತೀಯ ಹಾಗೂ ಕೋಲಾಟ ಸ್ಪರ್ಧೆಯಲ್ಲಿ ಶಾಂತಮ್ಮ ತಂಡ ದ್ವಿತೀಯ ಸ್ಥಾನ ಗಳಿಸಿದೆ.