ನಕಲಿ ಅಂಕಪಟ್ಟಿ ವಿರುದ್ಧ ಕ್ರಮ‌ಕ್ಕೆ ಒತ್ತಾಯ

264

ಕೋಲಾರ: ಅಂಕಪಟ್ಟಿ ಪ್ರಕರಣದ ಸುತ್ತಮುತ್ತ ನಡೆದಿರುವ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ‌ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದರು.
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಿಂದ ಕಳಪೆ ಗುಣಮಟ್ಟದ ಅಂಕಪಟ್ಟಿಗಳನ್ನು ಮುದ್ರಿಸಲಾಗುತ್ತಿದ್ದು ಅನೇಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.ಕಪ್ಪು ಪಟ್ಟಿಗೆ ಸೇರಿದ ಕಂಪನಿಗಳಿಗೆ ಟೆಂಡರ್ ನೀಡುತ್ತಿರುವುದನ್ನು ಗಮನಿಸಿದರೆ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು,ಇತ್ತೀಚಿಗೆ NSUI ಸಚಿವರ ಮೇಲೆ ಮಾಡಿದ ಆರೋಪಕ್ಕೆ ಪುಷ್ಟಿ ನೀಡುವಂತಿದೆ.ಈ ಪ್ರಕರಣದಲ್ಲಿ ಕೂಡಲೇ ಸಚಿವರು ರಾಜಿನಾಮೆ ನೀಡಬೇಕೆಂದು ತಾಲ್ಲೂಕು ಸಂಚಾಲಕರಾದ ನವೀನ್ ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ವಿಜಯ್,ಮೋಹನ್,ಮಣಿ,ನಾಗೇಶ್,ಶಿವರಾಜ್,ಕೀರ್ತಿ, ಅರುಣ್,ಸಂತೋಷ್ ಮುಂತಾದವರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.