ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯ

198

ಕೋಲಾರ / ಬಂಗಾರಪೇಟೆ ; ನಮ್ಮೂರು ಬಂಗಾರಪೇಟೆ ತಾಲ್ಲೂಕು ಕಛೇರಿ ಮುಂದೆ ಎಲ್ಲಾ ವರ್ಗದ ವಿದ್ಯಾರ್ಥಿ ಗಳಿಗೆ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ ಎಸ್.ಎಫ್.ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ನಡೆಯಿತು, ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯರನ್ನು ಎಸ್.ಎಫ್.ಐ ಜಿಲ್ಕಾಧ್ಯಕ್ಷ ವಾಸುದೇವರೆಡ್ಡಿ ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿ ಗಳಿಗೆ ಉಚಿತ ಬಸ್ ನೀಡದೆ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿ, ತಹಸೀಲ್ದಾರ್ ಸತ್ಯಪ್ರಕಾಶ್ ಗೆ ಮನವಿ ಪತ್ರ ಸಲ್ಲಿಸಲಾಯಿತು.