ಮಹಾಲಕ್ಷ್ಮಿಗೆ ವಿಶೇಷ ಪೂಜೆ

221

ತುಮಕೂರು/ ಕೊರಟಗೆರೆ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಾಲಯದಲ್ಲಿ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಬ್ಬದ ಪ್ರಯುಕ್ತ ಲಕ್ಷ್ಮೀ ದೇವಿಯ ದರ್ಶನಕ್ಕೆ ಬೆಂಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲಿನ ಜನತೆ ಮುಂಜಾನೆ ೪ ಗಂಟೆಯಿಂದಲೆ ಸಾಲುಗಟ್ಟಿ ನಿಂತಿದ್ದರು. ಇನ್ನು ಭಕ್ತಾದಿಗಳ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗಿತ್ತು.