ಸ್ವಾತಂತ್ರ್ಯ ಪ್ರತಿಯೊಬ್ಬರ ಹಕ್ಕು ಮತ್ತು ಜವಾಬ್ದಾರಿ

253

ಬಳ್ಳಾರಿ /ಹೊಸಪೇಟೆ. ಸ್ವಾತಂತ್ರ್ಯ ಪ್ರತಿಯೊಬ್ಬ ಭಾರತೀಯನ ಹಕ್ಕು ಮತ್ತು ಜವಾಬ್ದಾರಿ ಕೂಡ ಆಗಿದೆ ಎಂದು ಸಹಾಯಕ ಆಯುಕ್ತ ಪ್ರಶಾಂತ ಕುಮಾರ್ ಹೇಳಿದರು.

ಸ್ಥಳೀಯ ತಾಲೂಕು ಕ್ರೀಡಾಂಗಣದಲ್ಲಿಂದು ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ 71ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ದ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಬ್ರಿಟೀಷರಿಂದ ಭಾರತವನ್ನು ಮುಕ್ತಗೊಳಿಸಿದ, ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ರಾಜೇಂದ್ರಪ್ರಸಾದ್ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ನಾವಿಂದು ಸ್ಮರಿಸಬೇಕಾಗಿದೆ. ಭಾರತದ ಭವ್ಯ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಗೆ ಪ್ರತಿಯೊಬ್ಬರು ಗೌರವ ನೀಡುವ ಜೊತೆಗೆ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಆನಂದ್ ಸಿಂಗ್, ಹಂಪಿ ಭುವನೇಶ್ವರಿ ಸನ್ನಿಧಿಯಿಂದ, ಸ್ಫೂರ್ತಿ ವೇದಿಕೆ ಕಾರ್ಯಕರ್ತರು ತಂದ ಜ್ಯೋತಿಯನ್ನು ಬೆಳಗಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಮಾರ ಎಸ್., ಅಪರ ಸಿವಿಲ್ ನ್ಯಾಯಾಧೀಶರಾದ ಬಿ.ಚೆನ್ನಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಕುಮಾರಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಜೆ.ನೀಲಮ್ಮ, ನಗರಸಭೆ ಅಧ್ಯಕ್ಷ ಎನ್.ಅಬ್ದುಲ್ ಖದೀರ್, ತಾ.ಪಂ.ಉಪಾಧ್ಯಕ್ಷ ಕೆ.ಗಾದಿಲಿಂಗಪ್ಪ, ತಹಶೀಲ್ದಾರರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷರಾದ ಹೆಚ್.ವಿಶ್ವನಾಥ, ಎಪಿಎಂಸಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ, ಹೊಸಪೇಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿ.ವೆಂಕಟೇಶ್ವರ ರೆಡ್ಡಿ, ಪಿ.ಎಲ್.ಡಿ.ಬಿ. ಅಧ್ಯಕ್ಷ ಅಮಾಜಿ ಹೇಮಣ್ಣ, ನಗರಸಭೆ ಪೌರಾಯುಕ್ತ ವಿ.ರಮೇಶ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಶಿ, ಡಿವೈಎಸ್ಪಿ ಕೆ.ಶಿವಾರೆಡ್ಡಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಿಶೋರ್ ಕುಮಾರ್, ಟಿ.ಬಿ.ಡ್ಯಾಂ ಪಿ.ಐ ಆಂಜನೇಯ, ನಗರಸಭೆ ಸದಸ್ಯರಾದ ಗೌಡ್ರ ರಾಮಚಂದ್ರ, ಜಿ.ಕುಲ್ಲಾಯಪ್ಪ, ಟಿ.ಚಿದಾನಂದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಿಕ್ಷಕರು, ಸರ್ಕಾರ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಹಾಗೂ ಶಾಲಾ ಮಕ್ಕಳಿಂದ ಧ್ವಜ ವಂದನೆ, ಶಾಲಾ ಮಕ್ಕಳಿಂದ ವಿವಿಧ ಕವಾಯತು, ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ಗಮನ ಸೆಳೆಯಿತು.