ಬೈಕ್‌ಗೆ,ಲಾರಿ ಡಿಕ್ಕಿ: ಮಹಿಳೆ ಸಾವು

413

ಬಳ್ಳಾರಿ /ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬೈಕ್‌ಗೆ ಜಿಂದಾಲ್ ಉಕ್ಕಿನ ಶೀಟ್ ಸಾಗಿಸುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕುಡಿತಿನಿ ಪಟ್ಟಣದ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾಳೆ.

ಕುಡುತಿನಿಯ ರಾಜೇಶ್ವರಿ (25) ಸ್ಥಳದಲ್ಲೇ ಮೃತಪಟ್ಟ ಮಹಿಳೆ. ಆಕೆಯ ಮಾವ ಸಿದ್ದಪ್ಪನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೊಸಪೇಟೆ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಸಂಬಂಧ ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರತಿ ನಿತ್ಯ ಜಿಂದಾಲ್ ನಿಂದ ಸಾವಿರಾರು ಲಾರಿಗಳು ಎಗ್ಗಿಲ್ಲದೇ ಸಂಚರಿಸುತ್ತಿದ್ದು ಹಲವು ರೀತಿಯ ಅವಘಡಗಳು ಸಂಭವಿಸುತ್ತಿವೆ. ಸಂಚಾರಿ ಪೊಲೀಸರು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ