ಸ್ಕಿಲ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ

290

ಬೆಂಗಳೂರು/ಮಹದೇವಪುರ:– ಪ್ರಧಾನಮಂತ್ರಿ ಕನಸಿನ ಯೋಜನೆಗಳಲ್ಲೊಂದಾದ ಸ್ಕಿಲ್ ಇಂಡಿಯಾ ಯೋಜನೆಯನ್ನು ಪ್ರೊತ್ಸಾಹಿಸಿರುವ ಪ್ರಿಸ್ಟೇಜ್ ಮತ್ತು ಮುಂಬೈನ ರುಸ್ತುಮ್ ಜೀ ಗ್ರೂಪ್ ಸಂಸ್ಥೆಗಳು,ಯುವಕರಿಗೆ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಮುಂದಾಗಿದ್ದು ಮೊದಲ ಘಟಿಕೋತ್ಸವ ಕಾರ್ಯಕ್ರಮ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್ ಖಾತೆ ಸಚಿವ ತನ್ವೀರ್ ಸೇಠ್ ಯುವಕರ ಕೌಶಲ್ಯ ತರಬೇತಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಬೈಟ್:- ತನ್ವೀರ್ ಸೇಠ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್ ಖಾತೆ ಸಚಿವ ಕರ್ನಾಟಕ ಸರ್ಕಾರ.

ರಾಜ್ಯ ಸರ್ಕಾರ ನೂತನವಾಗಿ ಅಸ್ತಿತ್ವಕ್ಕೆ ತಂದಿರುವ ಕೌಶಲ್ಯಾಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ದೆಸೆಯಲ್ಲೆ ಹಲವಾರು ರೀತಿಯ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಖಾಸಗೀ ಸಂಸ್ಥೆಗಳೂ ಕೈಜೊಡಿಸುತ್ತಿರುವುದು ಸಂತಸದ ಸಂಗತಿ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯ ಪಟ್ಟರು.

ಬೈಟ್. ಮುರಳೀಧರ ಹಾಲಪ್ಪ.ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ.

ಇದೇವೇಳೆ ವೃತ್ತಿಪರ ಶಿಕ್ಷಣವನ್ನು ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇನ್ನು ಹಲವು ಪ್ರಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.