ಬಿಜೆಪಿ ಸದಸ್ಯತ್ವ ಅಭಿಯಾನ

376

ಬಳ್ಳಾರಿ/ಹೊಸಪೇಟೆ:ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ಇತ್ತೀಚೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ಜರುಗಿತು.
ಬಿಜೆಪಿ ಕಾನೂನು ಮತ್ತು ಸಂಸದೀಯ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಹಾಗೂ ವಕೀಲ ಮೋಹನ್ ಕುಮಾರ್ ದಾನಪ್ಪ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕಾನೂನು ಮತ್ತು ಸಂಸದೀಯ ಪ್ರಕೋಷ್ಟದ ರಾಜ್ಯ ಸಂಚಾಲಕ ಆರ್. ರಾಜಣ್ಣ ನವರ ಸೂಚನೆ ಮೇರೆಗೆ ನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಸ್ವಚ್ಚ ಆಡಳಿತ ನೀಡುತ್ತಿದೆ. ನರೇಂದ್ರ ಮೋದಿಯವರ ಕಾರ್ಯವೈಖರಿಗೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪುವಂತೆ ಮಾಡಿದೆ. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್  ಸರ್ಕಾರ ಭ್ರ,ಟಾಚಾರದಲ್ಲಿ ಮುಳುಗಿದೆ. ಇದರಿಂದ 2018ರ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರ ನೇತೃತ್ವದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ಪಿ.ನಾಗಭೂಷಣ್, ಮಧುಸೂದನ್ ಶೆಟ್ಟಿ, ಜಿ.ಪ್ರಕಾಶ್, ಪುಷ್ಪಲತಾ, ಸತೀಶ್, ಕೆ.ಪಿ.ಶರಣಪ್ಪ, ಚಂದ್ರಶೇಖರ್ ಯಲಗೋಡ, ಸತ್ಯನಾರಾಯಣ, ರಘು, ರವಿ, ವಿಠ್ಠಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.