ವಿಚಾರ ವೇದಿಕೆ…ಪ್ರತಿಭಾ ಪುರಸ್ಕಾರ

257

ಮಂಡ್ಯ/ಮಳವಳ್ಳಿ: ಡಾ.ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ತಾಲ್ಲೂಕು ಘಟಕ ದ ಉದ್ಘಾಟನಾ ಸಮಾರಂಭ ಹಾಗೂ ಎಸ್.ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಅಶೋಕನಗರದಲ್ಲಿ ನಡೆಸಲಾಯಿತು. ಕಾರ್ಯಕ್ರಮ ವನ್ನು ನವದೆಹಲಿ ಸೂಕ್ಷ ಮತ್ತು ಸಣ್ಣ ಮಾಧ್ಯಮ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಬಿ.ಹೆಚ್ ಅನಿಲ್ ಕುಮಾರ್ ಉದ್ಘಾಟಿಸಿ ಮಾದಿಗ ಜನಾಂಗದವರು ಕುಡಿತಕ್ಕೆ ದಾಸರಾಗಿದ್ದಾರೆ ಎಂಬ ಹಣೆಪಟ್ಟಿ ನೀಡಲಾಗುತ್ತಿದೆ ಅದನ್ನು ಮಹಿಳೆಯರು ಹೋಗಲಾಡಿ ತಮ್ಮ ತಮ್ಮ ಗಂಡರನ್ನು ತಿದ್ದಿ ಕುಡಿತದಿಂದ ಬಿಡಿಸುವ ಜೊತೆಗೆ ಮಕ್ಕಳನ್ನು ವಿದ್ಯಾವಂತರಾಗಿ ಮಾಡಿ ಎಂದರು. ಇದೇ ಸಂದರ್ಭದಲ್ಲಿ ಎಸ್ .ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಎಂ.ಜಿ ಅಪ್ಪಾಜಿ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಕುಮಾರ. ಶಂಕರ್ .ಬೆಂಗಳೂರು ಅಭಿವೃದ್ಧಿ ಪ್ರಾದಿಕಾರದ ಮುಖ್ಯ ಕಾರ್ಯದರ್ಶಿ ಎನ್.ಸಿ ವೆಂಕಟರಾಜು, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತರಾದ ಮುತ್ತಪ್ಪಣ್ಣ ಸೇರಿದಂತೆ ಮತ್ತಿತ್ತರರು ಇದ್ದರು