ಕಾಮಗಾರಿಗಳಿಗೆ ಭೂಮಿಪೂಜೆ..

491

ಬಳ್ಳಾರಿ/ಹೊಸಪೇಟೆ:ಕಮಲಾಪುರ ಪಟ್ಟಣದಲ್ಲಿಂದು ಜರುಗಿದ ಸಮಾರಂಭದಲ್ಲಿ 2017-18ನೇ ಸಾಲಿನ ನಗರೋತ್ಥಾನದ 2ನ ಹಂತದ ಯೋಜನೆಯಡಿ ಮಂಜೂರಾದ ಅಂದಾಜು 85.35 ಲಕ್ಷ ರೂ ವೆಚ್ಚದಲ್ಲಿ ಪಟ್ಟಣದ ವಿವಿಧ ವಾರ್ಡುಗಳಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಆನಂದ್ ಸಿಂಗ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಮಲಾಪುರ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಮೊದಲ ಆದ್ಯತೆ ನೀಡಲಾಗುವುದು. ಹಂತ ಹಂತವಾಗಿ ಪಟ್ಟಣದ ಎಲ್ಲಾ ವಾರ್ಡುಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಾ.ಬಿ.ಆರ್.ಮಳಲಿ, ಮಾಜಿ ಅಧ್ಯಕ್ಷ ಎಸ್.ವಿ.ಮುಕ್ತಿಯಾರ್ ಪಾಷಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಣಿರಾಜ್, ಮುಖಂಡರಾದ ಧರ್ಮೇಂದ್ರ ಸಿಂಗ್, ಸಂದೀಪ್ ಸಿಂಗ್, ಸೇರಿದಂತೆ ಸದಸ್ಯರು, ಸ್ಥಳೀಯ ಮುಖಂಡರು ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.