ಬಯಲು ಬಹಿರ್ದೆಸೆ ಜೀವಂತ..!?

235

ಸರ್ಕಾರದ ಶೌಚಾಲಯದ ಆಂದೋಲನ ಈ ಗ್ರಾಮದಲ್ಲಿ ಸಫಲವಾಗಿಲ್ಲ
————————————
೫೦ ಮನೆಗಳ ಈ ಗ್ರಾಮದಲ್ಲಿ ಬಯಲು ಬಹಿರ್ದೆಸೆ ಜೀವಂತ
——————————
ತುಮಕೂರು/ಚಿಕ್ಕನಾಯಕನಹಳ್ಳಿ : ಹುಳಿಯಾರು: ಬಯಲು ಬಹಿರ್ದೆಸೆ ಮುಕ್ತ ಆರೋಗ್ಯವಂತ ಕರ್ನಾಟಕ ಮಾಡಲು ಸರ್ಕಾರ ಶೌಚಾಲಯದ ಆಂದೋಲನವನ್ನೇ ಹುಟ್ಟು ಹಾಕಿದರೂ ಕೂಡ ಇದರ ಅರಿವೇ ಇಲ್ಲದಂತೆ ಬಯಲಿನಲ್ಲಿಯೇ ಬಹಿರ್ದೆಸೆಗೆ ಹೋಗುವ ಗ್ರಾಮ ಇಂದಿಗೂ ಇರುವುದು ಯೋಜನೆಯ ಸಫಲತೆಯನ್ನು ಪ್ರಶ್ನಿಸುವಂತಾಗಿದೆ.

ಹೌದು, ಹುಳಿಯಾರಿನ ಕೂಗಳತೆಯಲ್ಲಿರುವ ಸೈಯದ್ ಸಾಬ್ ಪಾಳ್ಯದಲ್ಲಿ ಐವತ್ತು ಕುಟುಂಬಗಳಿದ್ದು,ಶೌಚಾಲಯದ ಬಗ್ಗೆ ಅರಿವಿದ್ದರೂ ಕೂಡ ಅನುದಾನ ಬರುವುದಿಲ್ಲ,ಬಂದರೂ ತಡವಾಗುತ್ತದೆ ಎಂಬ ನೆಪವೊಡ್ಡಿ ಶೌಚಾಲಯದ ಉಸಾಬರಿಯೇ ಬೇಡವೆಂದು ಸುಮ್ಮನಾಗಿದ್ದಾರೆ.

ಈ ಊರಿನಲ್ಲಿ ಇಂದಿಗೂ ಇರುವುದು ಒಂದೇ ಶೌಚಾಲಯ.ಮಿಕ್ಕ ಐವತ್ತು ಹೆಚ್ಚು ಮನೆಗಳಿಗೆ ಶೌಚಾಲಯದ ಭಾಗ್ಯವಿಲ್ಲ.ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಹೆಣ್ಣು ಮಕ್ಕಳು ಬಯಲು,ಗದ್ದೆ,ಹೊಲಗಳನ್ನು ಆಶ್ರಯಿಸಬೇಕಾಗಿದೆ.