ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು…

283

ಬಳ್ಳಾರಿ/ಬಳ್ಳಾರಿ:ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತ ಸೃಷ್ಠಿಯಾಗಿದೆ, ಮಳೆ ಪ್ರವಾಹದಿಂದ ಸಾವಿರಾರು ಎಕರೆ ಬೆಳೆ ಹಾನಿಯಾಗಿ ನೂರಾರು ಮನೆಗಳು ನೆಲಕಚ್ಚಿವೆ‌,ಹೀಗಾಗಿ ಹಾನಿಗೊಳಗಾದ ಪ್ರದೇಶಗಳಿಗಿಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳ್ಳಾರಿ ತಾಲೂಕಿನ ಸಿಂಧವಾಳ, ಜಾಲಿಹಾಳ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು ಬೆಳೆ ಹಾನಿ ವೀಕ್ಷಣೆ ಮಾಡಿದರು, ಬಳ್ಳಾರಿ ತಾಲೂಕಿನಲ್ಲೆ ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ಎಕರೆ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ 

ವರದಿ ನೀಡುವಂತೆ ಸೂಚನೆ ನೀಡಿದರು. ಇದೇ ವೇಳೆ ರೈತರೊಂದಿಗೆ ಮಾತನಾಡಿದ ಸಚಿವರು ಸರ್ಕಾರದೊಂದಿಗೆ ಚರ್ಚೆ ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು. ಜೊತೆಗೆ ಟಿಬಿ ಡ್ಯಾಂನಿಂದ ಎರಡನೆ ಬೆಳೆಗೆ‌ ನೀರು‌ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ನೀರು ‌ಬಿಡಲಾಗುತ್ತಿದೆ ಎಂದು ತಿಳಿಸಿದರು,
ಬೈಟ್, ಸಂತೋಷ ಲಾಡ್ ( ಕಾರ್ಮಿಕ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ )