ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ…

698

ಬೆಂಗಳೂರು/ಕೆ.ಆರ್.ಪುರ:ಬೆಂಗಳೂರಿನ ಕೆ.ಆರ್.ಪುರ ಕೇಂಬ್ರಿಡ್ಜ್ ಕಾಲೇಜಿನಲ್ಲಿ ೬೨ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದು,ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್, ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಗಂಗಾವತಿ ಪ್ರಣೇಶ್ ಹಾಗೂ ನರಸಿಂಹ ಜೋಶಿ ಹಾಸ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ತಮ್ಮ ಹಾಸ್ಯದ ಮಾತುಗಳಿಂದ ವಿದ್ಯಾರ್ಥಿಗಳನ್ನು ರಂಜಿಸಿದರು.