ಗ್ರಾಮ ವಾಸ್ತವ್ಯ ಕಾರ್ಯಕ್ರಮ..

422

ಬಳ್ಳಾರಿ/ಹೊಸಪೇಟೆ.ತಾಲೂಕಿನ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 76-ವೆಂಕಟಾಪುರ ಗ್ರಾಮದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಗ್ರಾಮ ವಾಸ್ತವ್ಯ ನಡೆಸಲಾಯಿತು.ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 76-ವೆಂಕಟಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಗ್ರಾಮದ ತಿಂದಮ್ಮ ಹಾಗೂ ಹನುಮಂತಪ್ಪ ಎಂಬುವವರ ಮನೆಯಲ್ಲಿ ಆರಂಭವಾದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಆಶಾಲತಾ ಸೋಮಪ್ಪ, ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ಶತಮಾನೋತ್ಸವ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಆದೇಶದ ಮೇರೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮದಲ್ಲಿ ವಾಸ್ತವ್ಯ ಹೂಡುವ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಜನರಿಂದ ಆಲಿಸಿ, ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಗುಜ್ಜಲ ಜಯಲಕ್ಷ್ಮಿ, ಪಕ್ಷದ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ರಜಿಯಾ ಬೇಗಂ, ತಾಲೂಕು ಅಧ್ಯಕ್ಷೆ ಮೈಮಿನ್ನೀಸಾ, ಕಾಂಗ್ರೆಸ್ ಪಕ್ಷದ ಪ್ರೊಫೆಷನಲ್ ಸೆಲ್ ನ ಹೈದ್ರಾಬಾದ್-ಕರ್ನಾಟಕದ ಉಸ್ತುವಾರಿ ಹೆಚ್.ಎನ್.ಎಫ್.ಮಹಮದ್ ಇಮಾಮ್ ನಿಯಾಜಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಬಾಗುವಾನ್ ಫಹೀಂ ಬಾಷಾ, ಕೆಪಿಸಿಸಿ ಪರಿಶಿಷ್ಟ ಪಂಗಡಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಾ.ತಾರಿಹಳ್ಳಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ಅಯ್ಯಾಳಿ ಮೂರ್ತಿ, ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ನಿಂಬಗಲ್ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾರಿಹಳ್ಳಿ ಶಿವಮೂರ್ತಿ, ಮುಖಂಡರಾದ ಗುಜ್ಜಲ ರಘು, ಅಭೀದ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.