ವಿಶ್ವವಿದ್ಯಾಲಯದಲ್ಲಿ ಬೆಳ್ಳಿ ಮಹೋತ್ಸವ

308

ಬೆಂಗಳೂರು/ಮಹದೇವಪುರ:-ರಾಜ್ಯದಲ್ಲಿ ಸಾಕಷ್ಟು ವಿದ್ಯಾಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿದ್ದು, ಪ್ರತಿಭಾವಂತ ಯುವಕರು ಪ್ರಜ್ಞಾವಂತ ನಾಗರಿಕರಾಗಿ ದೇಶವನ್ನು ಮುನ್ನಡೆಸುವಷ್ಟು ಸಮರ್ಥರಾಗಿದ್ದಾರೆ, ಯುವಪೀಳಿಗೆ ಶಿಕ್ಷಿತರಾಗಿ ಉಜ್ವಲ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆಯಬೇಕಿದೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಸೂಚಿಸಿದರು.
ಕ್ಷೇತ್ರದ ಕುಂದಲಹಳ್ಳಿಯ ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡುತ್ತಾ 7 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡ ಸಿಎಮ್ಆರ್ಐ ವಿದ್ಯಾಸಂಸ್ಥೆ ಇಂದು 25ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಂತಾಗಿದೆ.
ಸಂಸ್ಥೆ ಕಟ್ಟಲು ವ್ಯಯಿಸಿರುವ ಶ್ರಮದ ಫಲವಾಗಿದೆ, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು ಪ್ರತೀಬಾವಂತ ವಿಧ್ಯಾರ್ಥಿಗಳಿಗೆ ಪ್ರತಿ ವರ್ಷವೂ ಪ್ರೋತ್ಸಾಹ ಧನ ನೀಡುವ ಮೂಲಕ ಶಿಕ್ಷಣದ ಮೇಲೆ ಅವರಿಗಿರುವ ಆಸಕ್ತಿಯನ್ನು ತೋರುತ್ತದೆ ಎಂದು ಅಭಿನಂದಿಸಿದರು.
ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಎಲ್ಲಾ ತರಹದ ಕೋರ್ಸುಗಳಿವೇ ಆದರೆ ವೈದ್ಯಕೀಯ ಶಿಕ್ಷಣ ಕೋರ್ಸುಗಳನ್ನು ಕೂಡಾ ಆರಂಭಿಸಲಿ, ಅದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಗೆ 25ವರ್ಷ ಸೇವೆಸಲ್ಲಿಸಿದ ಸಿಬ್ಬಂದಿಯನ್ನು ಸನ್ಮಾನಿಸಿದರು.
ಈ ಕಾರ್ಯಕ್ರಮದಲ್ಲಿ ಸಿಎಮ್ಆರ್ ಐ ಜ್ಞಾನಾರ್ಧ ಟ್ರಸ್ಟ್ ಅಧ್ಯಕ್ಷೆ ಮತ್ತು ಚಾನ್ಸೆಲರ್ ಡಾ.ಸಬಿತಾ ರಾಮಮೂರ್ತಿ, ಸಿಇಓ ಜಯದೀಪ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ.ಶ್ರೀನಿವಾಸ್, ಪಾಲಿಕೆ ಸದಸ್ಯ ಉದಯ್ ಕುಮಾರ್, ವರ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಯರಾಮರೆಡ್ಡಿ, ಸಂಸ್ಥೆಯ ಟ್ರಸ್ಟಿಗಳು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.