ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ…

283

ಬಳ್ಳಾರಿ/ಬಳ್ಳಾರಿ:ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ವೇತನ ನೀಡುವಂತೆ ಆಗ್ರಹಿಸಿ ಬೆಳ್ಳಂ ಬೆಳಗ್ಗೆ ಪ್ರತಿಭಟನೆ ಮಾಡಲಾಗುತ್ತಿದೆ. ಪಾಲಿಕೆಯ ಹೊರಗುತ್ತಿಗೆಯ ಪೌರ ಕಾರ್ಮಿಕರಿಗೆ ಕಳೆದ ೫ ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಪ್ರತಿ ತಿಂಗಳು ವೇತನ ಪಾವತಿ ಮಾಡಿದರೆ ಮಾತ್ರ ಮನೆ ನಡೆಯಲು ಸಾಧ್ಯ. ಇಲ್ಲವಾದರೇ ಹೇಗೆ ಜೀವನ ನಡೆಸುವುದು ಎಂದು ಅಳಲು ತೊಡಿಕೊಂಡ ಪೌರ ಕಾರ್ಮಿಕರು ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ವೇತನ ಪಾವತಿ ವಿಚಾರದಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ವೇತನ ನೇರಪಾತಿ ಮಾಡಬೇಕು. ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಯಾವಾಗಲೂ ಸಹ ತಾರತಮ್ಯ ಮಾಡಲಾಗುತ್ತಿದೆ. ಈ ನೀತಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ವೇತನ ಪಾವತಿ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.