ಮಕ್ಕಳ ಕಲ್ಯಾಣ ಇಲಾಖೆ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…‌

371

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ:ಸ್ವಂತ ಹಣದಲ್ಲಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡಿಸುವಂತೆ ಮಾಡಿ 5 ತಿಂಗಳಿದ ಸರ್ಕಾರ ಹಣ ನೀಡದೆ ನಮ್ಮ ಸಂಬಳ ಹಣ ಮೊಟ್ಟೆಗಳಿಗೆ ಕೊಡುವಂತಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ನಗರದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ಸಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಿ ಕಛೇರಿ ಬಳಿ ರಸ್ತೆ ಬಂದ್ ಮಾಡುವ ಮೂಲಕ ಮಳೆಯಲ್ಲಿ ಪ್ರತಿಭಟಿಸಿ ಸರ್ಕಾರದ ವಿರುದ್ಧ ದಿಕ್ಕಾರಗಳು ಕೂಗುವ ಮೂಲಕ ನೂರಾರು ಅಂಗನವಾಡಿ ಕಾರ್ಯಕರ್ತರು ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟಿಸಿದರು.