ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ..

229

ಬಳ್ಳಾರಿ/ಬಳ್ಳಾರಿ:ಮೈಸೂರಿನಲ್ಲಿ ಹನುಮಾನ ಜಯಂತಿ ಆಚರಣೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರೇ ಕಾರಣ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರ ನೇತೃತ್ವದಲ್ಲಿ ಹನುಮಾನ ಜಯಂತಿ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ಕುಮ್ಮಕ್ಕಿನಿಂದಲೇ ಪೊಲೀಸರು ಅಡ್ಡಿ ಉಂಟು ಮಾಡಿದ್ದಾರೆ. ಅಲ್ಲದೇ, ಪ್ರತಾಪ್ ಸಿಂಹ ಸೇರಿದಂತೆ, ಅನೇಕರನ್ನು ಬಂಧಿಸಲಾಗಿತ್ತು. ದೇವರ ಜಯಂತಿ ಹೆಸರಿನಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಗುರುಲಿ೦ಗನ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಲಿ೦ಗಪ್ಪ ಮುರಹರಿ ಗೌಡ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಕಾಶ ರೆಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.