ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

273

ಚಾಮರಾಜನಗರ:ವಿಜಯಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ನಗರದಲ್ಲಿಂದು ಕರ್ನಾಟಕ ರಕ್ಷಣೆ ಸೇನಾ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ್ದ ಕರ್ನಾಟಕ ರಕ್ಷಣೆ ಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.