ಬಹುತೇಕ ಬಂದ್ ಯಶಸ್ವಿ…

242

ವಿಜಯಪುರ/ಸಿಂದಗಿ/ಆಲಮೇಲ:ದಲಿತ ಬಾಲಕಿ ಮೇಲಿನ ಅತ್ಯಚಾರ ಹಾಗೂ ಕೊಲೆಗೆ ಎಲ್ಲೆಡೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಮುಕರನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಪ್ರಗತಿ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪಟ್ಟಣದಲ್ಲಿ ವ್ಯಾಪಾರಸ್ಥರು, ಆಟೋ ಚಾಲಕರು ಬಂದ್ ಗೆ ಬೆಂಬಲ ವ್ಯಕ್ತ ಪಡೆಸಿದ್ದಾರೆ. ಬೆಳಿಗ್ಗಿನಿಂದಲೇ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲಾಗಿದ್ದು, ಬಂದ್ ಯಶಸ್ವಿಯಾಗಿದೆ..ಒಟ್ಟಾರೆ

ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಬಂದ್ ಗಳು ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ರಾಜ್ಯ ಸೇರಿ ವಿಜಯಪುರ ಜಿಲ್ಲೆಯಲ್ಲಿ ಬಾರಿ ಜನಾಕ್ರೋಶ ವ್ಯಕ್ತವಾಗಿದೆ. ಇಂದು ಕೂಡ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣ ಬಂದ್ ಮಾಡುವ ಮೂಲಕ ಕಾಮುಕರ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ವಿವಿಧ ಸಂಘಟನೆಗಳು ಬೆಳಿಗ್ಗೆಯಿಂದಲೇ ಪಟ್ಟಣದಾಧ್ಯಂತ ಪ್ರತಿಭಟನೆ ನಡೆಸುವ ಮೂಲಕ ಕಾಮಕರನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಇತ್ತ ಪ್ರಗತಿ ಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತಗಳಲ್ಲಿ ಟೈರ್ ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.

ಆಲಮೇಲ ಪಟ್ಟಣದ ವಿವಿಧ ಪ್ರಗತಿ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗಿನಿಂದಲೇ ಪಟ್ಟಣದ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚುವ ಮೂಲಕ ಬಂದ್ ಗೆ ಬೆಂಬಲಿಸಿದರು. ಆಟೋ ಚಾಲಕರು,ಕಾರ್ಮಕ ಸಂಘಟನೆಗಳು ಸೇರಿದಂತೆ ಹತ್ತಾರು ಸಂಘಟನೆಗಳು ಬಂದ್ ಗೆ ಬೆಂಬಲಿಸಿದ್ರು.

ಬೈಟ್: ಶಿವರಾಜ ನಾಯಕ ಮಾತನಾಡಿದರು:

ವರದಿ: ನಮ್ಮೂರು ಟಿವಿ ನಂದೀಶ ಹಿರೇಮಠ ಸಿಂದಗಿ