ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ಚಾಲನೆ…

473

ಬೀದರ್/ಬಸವಕಲ್ಯಾಣ:ಶ್ರೀ ಜಗದ್ಗುರು ಬಸವಕುಮಾರ ಶಿವಯೋಗಿಗಳ 42ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಬೀದರ್ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲ್ಲೂಕಿನ ಹುಲಸೂರನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.ಸಮ್ಮೇಳನ ಉದ್ಘಾಟನೆಗೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ವೈಭವದೊಂದಿಗೆ ಸಂಭ್ರಮದಿಂದ ಮೆರವಣಿಗೆ ಜರುಗಿತು. ನಾಡಿನ ವಿವಿಧೆಡೆಯಿಂದ ಆಗಮಿಸಿದ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದವು.ಹುಲಸೂರಿನ ಶ್ರೀ ಡಾ. ಶಿವಾನಂದ ಮಹಾಸ್ವಾಮಿಗಳು. ಕಸಾಪ ಜಿಲ್ಲಾಧ್ಯಕ್ಷ ಸುರೇಶ್ ಚನಶೆಟ್ಟಿ. ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಎಂ.ಜಿ. ದೇಶಪಾಂಡೆ. ಜಿಲ್ಲಾ ಪಂಚಾಯಿತಿ ಸದಸ್ಯ ಸುಧೀರ ಕಾಡಾದಿ. ಮಾಜಿ ಸದಸ್ಯೆ ಲತಾ ಶಾಂತಕುಮಾರ್ ಹಾರಕೂಡೆ ಸೇರಿದಂತೆ ಗಣ್ಯರು, ಸಾಹಿತಿಗಳು, ಶಾಲಾ ಮಕ್ಕಳು, ಕಲಾವಿದರು ಸೇರಿದಂತೆ ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.