ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ.

287

ಬೆಂಗಳೂರು/ ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಅರಾಜಕತೆ ಹಾಗೂ ಬಿಬಿಎಂಪಿ ಕಚೇರಿಯಲ್ಲಿ ಪೆಟ್ರೋಲ್ ಸುರಿದು ದಾಂದಲೆ ನಡೆಸಿದ ಪೆಟ್ರೋಲ್ ನಾರಾಯಣಸ್ವಾಮಿ ಯನ್ನು ಬಂದಿಸುವಂತೆ ಆಗ್ರಹಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆ.ಆರ್.ಪುರ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಡಿ.ಎ. ಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಹ್ಯಾರಿಸ್ ಸೇರಿದಂತೆ ಹಲವು ನಾಯಕರುಗ ಪ್ರತಿಕೃತಿ ದಹಿಸಿ ಅಕ್ರೋಶ ವ್ಯಕ್ತಪಡಿಸಿದರ. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಎ. ಗೋಪಾಲ್ ಕೆ.ಆರ್.ಪುರ ಕ್ಷೇತ್ರದಲ್ಲಿ ಕೊಲೆ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆಲ್ಲ ಮುಂದಿನ ಚುನಾವಣೆಯಲ್ಲಿ ಜನರೆ ತಕ್ಕ ಪಾಠ ಕಲಿಸಲಿದ್ದು, ಬಿಬಿಎಂಪಿ ಕಚೇರಿಯಲ್ಲಿ ಪೆಟ್ರೋಲ್ ಸುರಿದು ದಾಂದಲೆ ನಡೆಸಿದ ಕಾಂಗ್ರೆಸ್ ಮುಖಂಡ ಪೆಟ್ರೋಲ್ ನಾರಾಯಣಸ್ವಾಮಿ ಬಂದಿಸುವಂತೆ ಒತ್ತಾಯಿಸಿದರು.

ಬೈಟ್: ಡಿ.ಎ. ಗೋಪಾಲ್, ಜೆಡಿಎಸ್ ಅಭ್ಯರ್ಥಿ