ಗ್ರಾಮೀಣ ಆರೋಗ್ಯ ಅಭಿಯಾನ

180

ಚಿಕ್ಕಬಳ್ಳಾಪುರ/ಚಿಂತಾಮಣಿ :-ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಸುಮಾರು 10 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ತಾಯಿ ,ಮಗು ಆರೈಕೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ

ಬಳಿಕ ಮಾತನಾಡಿದ ಶಾಸಕರು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಬೇಕಾದ ಯಂತ್ರೋಪಕರಣಗಳು ಲಭ್ಯ ವಿದ್ದು ವೈದ್ಯರ ಮತ್ತು ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡಿ ಒದಗಿಸುವುದಾಗಿ ಹಾಗೂ
ಆಸ್ಪತ್ರೆ ಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ನಗರಸಭೆ ಆಯುಕ್ತರೊಂದಿಗೆ ಚರ್ಚೆ ನಡೆಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಶಾಸಕ ಜೆ.ಕೆ.ಕೃಷ್ಣಾ ರೆಡ್ಡಿ ತಿಳಿಸಿದರು.

ಇದೇ ಆಸ್ಪತ್ರೆ 2014ರಲ್ಲಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ್ದು ಕಟ್ಟಡ ಕಾಮಗಾರಿ ಮುಗಿದು ಶೇ.80 ರಷ್ಟು ಸಾಮಗ್ರಿಗಳು ಬಂದಿದೆ. ಕೆಲ ಯಂತ್ರೋಪಕರಣಗಳು ಬಾರದೆ ಇರುವ ಹಿನ್ನೆಲೆಯಲ್ಲಿ ಉದ್ಘಾಟನೆ ಮಾಡುವ ಕಾರ್ಯ ತಡವಾಯಿತು. ಈ ಬಗ್ಗೆ ಆರೋಗ್ಯ ಸಚಿವರು ವಿಧಾನ ಸಭೆಯಲ್ಲಿ ಸ್ಪಷ್ಟ ಉತ್ತರವನ್ನು ನೀಡಿದ್ದಾರೆಂದರು.

ಈ ಸಂದರ್ಭದಲ್ಲಿ ರಾಜ್ಯ ಕರಕುಶಲ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ವಾಣಿ ಕೃಷ್ಣಾ ರೆಡ್ಡಿ,ಜಿಲ್ಲಾ ಪಂಚಾಯತಿ ಪ್ರಾಭಾರಿ ಅಧ್ಯಕ್ಷೆ ನಿರ್ಮಾಲಾ ಮುನಿರಾಜು ,ನಗರಸಭೆ ಉಪಾಧ್ಯಕ್ಷೆ ಸುಜಾತ ಶಿವಣ್ಣ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ ಯ ಆಡಳಿತಾಧಿ ವೈದ್ಯಾಧಿಕಾರಿಗಳು ಸಿಬ್ಬಂದಿ ಸೇರಿದಂತೆ ನಗರಸಭೆ ಇತರೆ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.