ಜನಾಶೀರ್ವಾದ ಯಾತ್ರೆ…

184

ಚಾಮರಾಜನಗರ/ಕೊಳ್ಳೇಗಾಲ:ರಾಜ್ಯಾದ್ಯಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಪಟ್ಟಣಕ್ಕೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ರೋಡ್ ಶೋ ನಡೆಸಿದರು.

ನಗರದ ಅಚ್ಗಾಳ್ ವೃತ್ತದಿಂದ ಸಾರ್ವಜನಿಕ ಆಸ್ಪತ್ರೆ ವೃತ್ತದವರೆಗೆ ರೋಡ್ ನಡೆಸಿದರು. ಬಳಿಕ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಗೆ ಭೇಟಿ ನೀಡಿದರು. ನೂತನ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ರಾಹುಲ್ ಗಾಂಧಿ ಇಡ್ಲಿ ವಡೆ, ಕೇಸರಿಬಾತ್, ಉಪ್ಪಿಟ್ಟು ಮಸಾಲೆದೋಸೆ ಸವಿದರು.ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನೋಡಲು ರೋಡ್ ಶೋ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆಯ ಎಡ ಬಲ ಬದಿಗಳಲ್ಲಿ ನಿಂತು ಕಾಂಗ್ರೆಸ್ ನಾಯಕರಿಗೆ ಕೈ ಬೀಸಿ ಸ್ವಾಗತಿಸಿದರು.ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಸೇರಿದ್ದ ಸಾರ್ವಜನಿಕರಲ್ಲಿ ನೂಕುನುಗ್ಗಲು ಉಂಟಾಗಿತ್ತು. ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಇಡೀ ಪಟ್ಟಣದಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ವೇಣುಗೋಪಾಲ್, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಆರ್.ಧ್ರುವನಾರಾಯಣ್, ಶಾಸಕ ಎಸ್.ಜಯಣ್ಣ, ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಎಸ್.ಬಾಲರಾಜ್, ನಗರಸಭಾ ಅಧ್ಯಕ್ಷ ಶಾಂತರಾಜು ಮುಂತಾದವರು ಜೊತೆಯಲ್ಲಿದ್ದರು.