ಅಧಿಕಾರಿಗಳ ವಿರುದ್ಧ ಹೆಚ್ಚಾಗುತ್ತಿವೆ ದೂರುಗಳು..!

168

ಚಿಕ್ಕಬಳ್ಳಾಪುರ/ಬಾಗೇಪಲ್ಲಿ:ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ‌.ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ‌ ಎಸ್ ಎನ್.ಸುಬ್ಬಾರೆಡ್ಡಿ ತಾಲ್ಲೂಕಿನ ಎಲ್ಲ ಇಲಾಖೆ ಗಳ ಪ್ರಗತಿ ಪರಿಶೀಲನೆ ಮಾಡುತ್ತಾ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹೆಚ್ಚಾಗಿ ದೂರುಗಳು ನನ್ನ ಗಮನಕ್ಕೆ ಬರುತ್ತಿವೆ ಅಧಿಕಾರಿಗಳು ನೀವು ಯಾವ ರೀತಿ ಕೆಲಸ ಮಾಡುತ್ತಿದ್ದೀರಾ?ಎಂದು ಮಹಿಳಾ ಮತ್ತುಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು .

ನಾವು ಜನಪ್ರತಿನಿಧಿಗಳು ನಮಗೆ ಅನೇಕ ದೂರು ಗಳು ಬರುತ್ತಿವೆ ದೂರುಗಳನ್ನು ನಿಮಗೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಮನೆಗೆ ಹೋಗಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭವತಿ ಯರಿಗೆ ಕಳಪೆಮಟ್ಟದ ಆಹಾರ ಪದಾರ್ಥ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ದೂರುಗಳು ಹೆಚ್ಚು ಬರುತ್ತಿವೆ ಇವುಗಳನ್ನು ಸರಿಪಡಿಸದಿದ್ದರೆ ನಿಮ್ಮಗಳ ಮೇಲೆ ಸೂಕ್ತ ಕ್ರಮ ಜರಿಗಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನ್ಯಾಯಬೆಲೆ ಅಂಗಡಿಗಳ‌ಪಡಿತರ ವಿತರಣೆಯಲ್ಲಿ ಅವ್ಯವಹಾರ ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರವಾಗುತ್ತಿದೆ ಇವುಗಳ ಬಗ್ಗೆ ನೀವು ಯಾವ ರೀತಿ ಕ್ರಮ ವಹಿಸಿದ್ದೀರಿ ಎಂದು ಆಹಾರ ಇಲಾಖೆಯ ನಿರೀಕ್ಷಕ ಸೂರ್ಯ ನಾರಾಯಣ್ ರನ್ನು ತೀವ್ರ ತರಾಟೆ ತೆಗೆದುಕೊಂಡರು.ಈ ಬಗ್ಗೆ ಉತ್ತರಿಸಲು ಆಗದ ಅಧಿಕಾರಿಗಳು ತಡಬಡಾಯಿಸಿದರು .

ನ್ಯಾಯಬೆಲೆ ಅಂಗಡಿಗಳಲ್ಲಿ ಕಂಪ್ಯೂಟರ್ ಸ್ಕೇಲ್ ಅಳವಡಿಸಲು ಕಾನೂನಿದೆ ಈ ಬಗ್ಗೆ ನೀವು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ತೂಕದಲ್ಲಿ ಮೋಸ ಹಣ ವಸೂಲಿ ಮಾಡುವಂತಹ ಪ್ರಕರಣಗಳು ತಾಲ್ಲೂಕಿ ನಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ನಾನು ನಾಲ್ಕು ನ್ಯಾಯ ಬೆಲೆ ಅಂಗಡಿಗಳ ಮಾಲೀಕರ ಲೈಸೆನ್ಸ್ ಅನ್ನು ರದ್ದು ಪಡಿಸಲು ಆದೇಶ ನೀಡಿದ್ದೇನೆ.ನೀವು ಯಾವ ರೀತಿ ಕೆಲಸ ಮಾಡುತ್ತಿದ್ದೀರಿ ಎಂಬುದು ನಿಮಗೆ ಅರ್ಥವಾಗುತ್ತಿಲ್ಲ ಇದೇ  ರೀತಿ  ಮುಂದುವರಿದರೆ ನಾವು ಬೇರೆ ರೀತಿಯಲ್ಲಿ ಕ್ರಮವನ್ನು ಕೈಗೊಳ್ಳ ಬೇಕಾಗುತ್ತದೆ ಎಂದು ಶಾಸಕರು ತರಾಟೆಗೆ ತೆಗೆದು ಕೊಂಡರು .

ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಜನರಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ನಾವು ಇಲಾಖೆಗಳ ಮೇಲೆ ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿ ನಾಗರಾಜ್.ಎಂ, ಇಒ.ಮಂಜುನಾಥ್, ತಾಲ್ಲೂಕು ಪಂಚಾಯ್ತು ಅಧ್ಯಕ್ಷ ಕೆಆರ್. ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್,ಜಿಲ್ಲಾ ಪಂಚಾಯಿತಿ ಸದಸ್ಯ ಬುರುಗುಮಡುಗು ನರಸಿಂಹಪ್ಪ ಸೇರಿದಂತೆ ಎಲ್ಲಇಲಾಖೆ ಅಧಿಕಾರಿಗಳು ಹಾಜರಿದ್ದರು .

ವರದಿ: ನಾಗಭೂಷಣ್ ಬಾಗೇಪಲ್ಲಿ