ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ

48

ಬೆಂಗಳೂರು/ಮಹದೇವಪುರ:ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಶಾಸಕ ಅರವಿಂದ್ ಲಿಂಬಾವಳಿ ತಿಳಿಸಿದರು. ಕ್ಷೇತ್ರದ ಯಮಲೂರು ಸರ್ಕಲ್ ನಲ್ಲಿ ನಾಡಪ್ರಭು 511 ನೇ ಕೆಂಪೇಗೌಡ ಜಯಂತಿಯ ಪ್ರಯುಕ್ತ ಅವರು ಪ್ರತಿಮೆಗೆ ಶಾಸಕ ಅರವಿಂದ ಲಿಂಬಾವಳಿ, ಎಂ.ಎಲ್.ಸಿ. ನಾರಾಯಣ ಸ್ವಾಮಿ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಅವರಿಗೆ ನಮನಗಳು ಸಲ್ಲಿಸಿದರು. ನಂತರ ಮಾತನಾಡಿದ ಶಾಸಕ ಅರವಿಂದ್ ಲಿಂಬಾವಳಿ, ಶಾಶ್ವತ ನದಿ ಮೂಲಕ ಸಾವಿರಾರು ಕೆರೆಗಳನ್ನು ನಿರ್ಮಿಸಿ ಜನಜೀವನವನ್ನು ಸುಗಮಗೊಳಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ಕೆಂಪೇಗೌಡರು ನಿರ್ಮಿಸಿರುವ ಕೆಂಪಸಾಗರ ಕೆರೆಯೂ ತನ್ನದೇ ಇತಿಹಾಸವನ್ನು ಹೊಂದಿದೆ. 1674ರಲ್ಲಿ ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕೆರೆಯನ್ನು ನಿರ್ಮಿಸಲಾಗಿದೆ. ವಿಶಾಲ ಪ್ರದೇಶದಲ್ಲಿ ನಿರ್ಮಾಣವಾಗಿರುವ ಕೆರೆಗೆ ಹಿಂದಿನ ಕಾಲದಲ್ಲಿ ಮಹತ್ವದ ಸ್ಥಾನ ನೀಡಲಾಗಿತ್ತು ಎಂದರು. ನಾಡಪ್ರಭು ಕೆಂಪೇಗೌಡರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ವಿಶ್ವದರ್ಜೆಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿ ಪಡಿಸಲು 35 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ನಮ್ಮ ಸರ್ಕಾರದ ವತಿಯಿಂದ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ನಗರವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ಘನತೆ ಕೆಂಪೇಗೌಡರಿಗೆ ಸೇರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮನೋಹರ್ ರೆಡ್ಡಿ, ಪಾಲಿಕೆ ಸದಸ್ಯರಾದ ರಮೇಶ್, ಉದಯ್ ಕುಮಾರ್,ಮುಖಂಡರಾದ ನಟರಾಜ್,ಕೆಂಪೆಗೌಡ,ಹೂಡಿ ಪಿಳ್ಳಪ್ಪ, ಶ್ರೀನಿವಾಸ್,ರಾಜೇಶ್,ಸಿದ್ದಲಿಂಗಯ್ಯ, ಲೋಕೇಶ್,ಜಯರಾಂ ರೆಡ್ಡಿ, ನಲ್ಲೂರುಹಳ್ಳಿ ನಾಗೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು