ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ…

291

ಮಂಡ್ಯ/ಮಳವಳ್ಳಿ:ಸಾರ್ವಜನಿಕರ ಆರೋಗ್ಯ ವ್ಯವಸ್ಥೆ ಬಲಪಡಿಸಲು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿ ಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ನೇತೃತ್ವದಲ್ಲಿ ಸಾರ್ವತ್ರಿಕ ಉಚಿತ ಕೋವಿಡ್ ಚಿಕಿತ್ಸೆ ನೀಡಬೇಕು, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಬೇಕು,ಕೋವಿಡ್ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ವತ್ರೆಗಳ ಮೇಲೆ ಡಿಎಂಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಸೇರಿದಂತೆ 12 ಬೇಡಿಕೆ ಗಳ ಮನವಿಯನ್ನು ಉಪ ತಹಸೀಲ್ದಾರ್ ಕುಮಾರ್ ರವರಿಗೆ ಸಲ್ಲಿಸಲಾಯಿತು. ಇನ್ನೂ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಶೋಭ, ತಾಲ್ಲೂಕು ಅಧ್ಯಕ್ಷೆ ಸುಶೀಲ,ಕಾರ್ಯದರ್ಶಿ ಮಂಜುಳ,ಜಯಶೀಲ ಸೇರಿದಂತೆ ಮತ್ತಿತ್ತರರು ಇದ್ದರು. ವರದಿ: ಎ.ಎನ್ ಲೋಕೇಶ್