ಸರ್ಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರ ಕಿಡಿ..!

370

ರಾಜ್ಯ ಸರ್ಕಾರವು ರೈತ, ಕಾರ್ಮಿಕರ ವಿರೋಧಿ ಸರ್ಕಾರವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣಸ್ವಾಮಿ ಕಿಡಿಕಾರಿದರು.

ಬೆಂಗಳೂರು/ ಕೆ.ಆರ್.ಪುರ:  ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಹಾಗೂ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸಲು ವಿಫಲವಾಗಿದ್ದು, ಕೊರೋನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೆ.ಆರ್.ಪುರ ದ ಬಿಬಿಎಂಪಿ ಕಚೇರಿಯಿಂದ ತಾಲ್ಲೂಕು ಕಚೇರಿಯ ವರೆಗೆ ಜಾಥ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ತಹಶಿಲ್ದಾರ್ ತೇಜಸ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು, ಪಾಲಿಕೆ ಸದಸ್ಯರಾದ ರಾದಮ್ಮ ವೆಂಕಟೇಶ್, ಉದಯ್ ಕುಮಾರ್, ಮಂಜುನಾಥ್, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಮುಖಂಡರಾದ ನಲ್ಲೂರಹಳ್ಳಿ ನಾಗೇಶ್, ಡಿ.ಎ.ಗೋಪಾಲ್,ಅಗರ ಪ್ರಕಾಶ್, ಮೇಡಹಳ್ಳಿ ರಾಖಿ ಇದ್ದರು.