ಸಚಿವರಿಂದ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟನೆ.

33

ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು

ದೊಡ್ಡಬಳ್ಳಾಪುರ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ‌ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.) ಅವರು ಇಂದು ಉದ್ಘಾಟಿಸಿದರು. ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟ ರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್,ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂಆರ್.‌ ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿಕೃಷ್ಣ,ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ,ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.