ಮೇಕ್‌ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಉಸ್ತುವಾರಿ ಸಚಿವರು.

100

ದೊಡ್ಡಬಳ್ಳಾಪುರ: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ‌ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.) ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣ‌ ಹಂತದಲ್ಲಿರುವ ಮೇಕ್‌ಶಿಫ್ಟ್ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ದೊಡ್ಡಬಳ್ಳಾಪುರ ಶಾಸಕರಾದ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.