ಅಕ್ರಮ ಗಾಂಜಾಗಿಡ ಬೆಳೆಸಿದ್ದ ಮಹಿಳೆ ಬಂಧನ

81

ಚಿಕ್ಕಬಳ್ಳಾಪುರ/ಚಿಂತಾಮಣಿ :ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಗಿಡಗಳನ್ನು ಬೆಳೆದ ಮಹಿಳೆಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಇರಗಂಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಖಚಿತ ಮಾಹಿತಿ ಮೇರೆಗೆ ಬಟ್ಲಹಳ್ಳಿ ಠಾಣೆಯ ಸಬ್ಇನ್ಸ್ಪೆಕ್ಟರ್ ನಾರಾಯಣ್ ಸ್ವಾಮಿ ಮತ್ತು ತಂಡ ದಾಳಿ ನಡೆಸಿ ಮನೆಯ ಹಿಂಭಾಗ ಬೆಳೆದಿದ್ದ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಬೆಳೆದಿದ್ದ ವಿಜಯಮ್ಮ ಕೋಂ ವೆಂಕಟರೆಡ್ಡಿ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.