ಬ್ಯಾಂಕ್ ವ್ಯವಸ್ಥಾಪಕರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ.

8

ಚಿಕ್ಕಬಳ್ಳಾಪುರ/ಚಿಂತಾಮಣಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಚಿಂತಾಮಣಿ ನಗರದ ಕರ್ನಾಟಕ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಾದ ಹರೀಶ್ ಪೂಜಾರಿ ರವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಯನ್ನು ಪ್ರಧಾನ ಮಾಡಲಾಗುವುದೆಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾಕ್ಟರ್ ಕೈವಾರ ಶ್ರೀನಿವಾಸ್ ರವರು ತಿಳಿಸಿದ್ದಾರೆ. ಆಗಸ್ಟ್ 3ರ ಮಂಗಳವಾರ ದಂದು ಬ್ಯಾಂಕಿಗೆ ಭೇಟಿ ನೀಡಿ ದ ಅವರು ಬ್ಯಾಂಕ್ ವ್ಯವಸ್ಥಾಪಕ  ಹರೀಶ್ ಪೂಜಾರಿ ರವರನ್ನು ಜಿಲ್ಲಾ ಕಸಾಪ ವತಿಯಿಂದ ಆತ್ಮೀಯ ವಾಗಿ ಸನ್ಮಾನಿಸಿ ನೆನಪಿನ ಕಾಣಿಕೆಯನ್ನು ನೀಡಿ ಪುರಸ್ಕರಿಸಿದರು.ಈ ಸಂದರ್ಭದಲ್ಲಿ ಮಾತ ನಾಡಿದ ಅವರು ಚಿಂತಾಮಣಿ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕನ್ನಡದ ವಾತಾವರಣ ಮೂಡಿದ್ದು ಎಲ್ಲಾ ಹಂತಗಳಲ್ಲೂ ಕನ್ನಡವನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕಾರ್ಯೋ ನ್ಮುಖ ವಾಗಿರುವ ಬ್ಯಾಂಕ್ ವ್ಯವಸ್ಥಾಪಕರ ಕನ್ನಡ ಅಭಿಮಾನ ವನ್ನು ಪರಿಗಣಿಸಿ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಯನ್ನು ನೀಡಲು ಜಿಲ್ಲಾ ಕಸಾಪ ತೀರ್ಮಾನಿಸಿದ್ದು ಮುಂದೆ ನಡೆ ಯುವ ಕಸಾಪ ಕಾರ್ಯಕ್ರಮದಲ್ಲಿ ಹರೀಶ್ ಪೂಜಾರಿ ರವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ಯನ್ನು ಪ್ರಧಾನ ಮಾಡಲಾಗುವುದೆಂದು ಹೇಳಿ ದರಲ್ಲದೆ, ಬ್ಯಾಂಕ್ ಸಿಬ್ಬಂದಿಯವರನ್ನು ಅಭಿನಂದಿಸಿದರು.