ಪಂಚಾಯ್ತಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

330

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ : ತಾಲ್ಲೂಕಿನ ವಾರಹುಣಿಸೇನಹಳ್ಳಿ ಗ್ರಾಮದಲ್ಲಿ ಸ್ವಚ್ಛ ಭಾರತ ಯೋಜನೆ ಮರಿಚೀಕೆಯಾಗಿದೆ.  ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೈರ್ಮಲ್ಯ ಹದಗೆಟ್ಟಿದ್ದು, ಇಲ್ಲಿನ ಚರಂಡಿಗಳು ಸ್ವಚ್ಛಇಲ್ಲದೇ ದುನಾ೯ತ ಬೀರುತ್ತಿವೆ.  ಸೊಳ್ಳೆಗಳಿಗೆ ಆಶ್ರಯತಣವಾಗಿ ಪರಿವರ್ತನೆಗೊಂಡಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಗ್ರಾಮಸ್ಥರಲ್ಲಿ ಆವರಿಸಿದೆ. ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕಾಗಿದೆ ಎಂದು ಸ್ಥಳೀಯರ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.