ನಿಯಮ ಉಲ್ಲಂಘನೆ… ನಿಷೇಧಾಜ್ಞೆ ಜಾರಿ

410

ಚಿಕ್ಕಬಳ್ಳಾಪುರ/ಚಿಂತಾಮಣಿ: ನಗರದ ತಾಲ್ಲೂಕು ಪಂಚಾಯಿತಿ ಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಅನುದಾನ ಹಂಚಿಕೆ ಯಲ್ಲಿ ತಾರತಮ್ಯ ಧೋರಣೆ ಯನ್ನು ಖಂಡಿಸಿ ತಾಲ್ಲೂಕು ಪಂಚಾಯಿತಿ ಮುಂದೆ ಜೆಡಿಎಸ್ ಪಕ್ಷ ದಿಂದ ದರಣಿ ನಡೆಸಿದರು. ತಾಲ್ಲೂಕು ಪಂಚಾಯಿತಿ ಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರ್ಕಾರದಿಂದ ಬರುವ ಅನುದಾನ ನೀಡದೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎನ್ನುವ ಆರೋಪದ ಹಿನ್ನಲೆಯಲ್ಲಿ  ಸೋಮವಾರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿರುದ್ಧ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ಉಂಟಾಗಿತ್ತು. ಪೊಲೀಸ್ ಅನುಮತಿ ಇಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷದ ವಿರುದ್ದ ಪ್ರತಿಭಟಬೆಗೆ ಮುಂದಾದಾಗ ಸ್ಥಳಕ್ಕೆ ಬಂದ ಪೋಲೀಸ್ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಚಿಂತಾಮಣಿ ಕ್ಷೇತ್ರದ ಶಾಸಕರದ ಜೆ ಕೆ ಕೃಷ್ಣಾ ರೆಡ್ಡಿ ಪೋಲೀಸ್ ಅಧಿಕಾರಿಗಳ ಮೇಲೆ ಆರೋಪ ಮಾಡಿದರು. ಎರಡೂ ಪಕ್ಷಗಳ ಜಟಾಪಟಿ ಪರಿಸ್ಥಿತಿ ಕೈಮೀರಿದ ಹಿನ್ನಲೆಯಲ್ಲಿ ನಗತದಲ್ಲಿ 144 ಸೆಕ್ಷನ್ ಜಾರಿಗೆ ಆದೇಶ ಮಾಡಲಾಗಿದೆ. ಎಂದು ತಹಸೀಲ್ದಾರ್ ಗಂಗಪ್ಪ ತಿಳಿಸಿದರು.