ಮೇಯರ್, ಉಪಮೇಯರ್ ಅಧಿಕಾರ ಸ್ವೀಕಾರ

300

ಬಳ್ಳಾರಿ: ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಗಿ ಜಿ.ವೆಂಕಟರಮಣ ಮತ್ತು ಉಮಾದೇವಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಮೇಯರ್ ಜಿ.ವೆಂಕಟರಮಣ ಅವರು ಬಳ್ಳಾರಿ ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ; ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರವನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, 24*7 ನಿರಂತರ ನೀರು ಪೂರೈಸುವ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ನಗರದ ಜನರಿಗೆ ನಿರಂತರ ನೀರು ಒದಗಿಸಲಾಗುವುದು ಮತ್ತು ಅನಧಿಕೃತ ನಳಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದರು.
ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ಉಮಾದೇವಿ, ಶಾಸಕ ಅನಿಲ್ ಲಾಡ್, ಬುಡಾ ಅಧ್ಯಕ್ಷ ಅಂಜನೇಯಲು, ಪಾಲಿಕೆ ಆಯುಕ್ತ ಎಂ.ಕೆ.ನಲ್ವಡಿ ಮತ್ತಿತರರು ಇದ್ದರು.