ನೀರಿನ ಸಮಸ್ಯೆ ಬಗೆಹರಿಸಲು ಶಾಸಕರ ಸಲಹೆ

285

ಚಿಕ್ಕ ಬಳ್ಳಾಪುರ/  ಬಾಗೇಪಲ್ಲಿ : ಹಳ್ಳಿಗಳಲ್ಲಿ ನೀರಿನ ಸಮಸ್ಯೆಗಳನ್ನು  ಪರಿಹರಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಮಾನ್ಯ ಶಾಸಕ ರಾದ ಎಸ್.ಎನ್ ಸುಬ್ಬಾರೆಡ್ಡಿ ತಿಳಿಸಿದರು. ಅವರು ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ  ಟಾಸ್ಕ್ ಫೋರ್ಸ್ ಸಭೆಯಲ್ಲಿ ಉದ್ದೇಶಿ ಮಾತನಾಡಿದರು ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡಬೇಕು ಪಿ.ಡಿ.ಓ ಅಧಿಕಾರ ಗಳು ಅಲ್ಲದೆ ಯಾವುದೇ ಹಳ್ಳಿಗಳಲ್ಲಿ ನೀರಿನ ಸಮಸ್ಯೆಗಳಿದ್ದರೆ ಅ ಗ್ರಾಮದ ಬಗ್ಗೆ  ಈ.ಓ. ಮತ್ತು ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕೊಳವೆ ಬಾವಿ ಕೋರಿಸುತ್ತೇವೆ ಎಂದು ತಿಳಿಸಿದರು. ಸುಮಾರು 40 ಕೊಳವೆ  ಒಂದು ವಾರದಲ್ಲಿ  ಕೂರೆಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಈ.ಓ. ಈಶ್ವರಪ್ಪ,  ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಅರ್ ನರೇಂದ್ರ ಬಾಬು, ಜಿಲ್ಲಾ ಪಂಚಾಯತಿ ಸದಸ್ಯರಾದ ಬೂರಗಮಡುಗು ನರಸಿಂಹ ಪ್ಪ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ,  ಕಾಂಗ್ರೆಸ್ ಮುಖಂಡ ಸುರೇಂದ್ರ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.