ತತ್ವ ಸಿದ್ಧಾಂತಗಳ ಪಾಲನೆ ಅಗತ್ಯ

495

ಬಳ್ಳಾರಿ / ಹೊಸಪೇಟೆ :ಪ್ರಸ್ತುತ ಸಂದರ್ಭದಲ್ಲಿ 12ನೇ ಶತಮಾನದಲ್ಲಿ ಹೊಸ ಕ್ರಾಂತಿಯನ್ನೆ ಮಾಡಿದ ಶಿವಶರಣರ ತತ್ವ-ಸಿದ್ಧಾಂತಗಳನ್ನು ಪಾಲಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಸ್ಥಳೀಯ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಹೆಚ್.ಎಸ್.ಕೋರಡ್ಡಿ ಹೇಳಿದರು.

ಸ್ಥಳೀಯ ಪತ್ರಿಕಾ ಭವನದಲ್ಲಿಂದು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಲಿಂಗಾಯತ ರೆಡ್ಡಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ತಮ್ಮ ನಡೆ-ನುಡಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಇಂದಿನ ಜನರು ಸಾಗುವ ಮೂಲಕ ಸಾತ್ವಿಕ ಸಮಾಜವನ್ನು ನಿರ್ಮಿಸಬೇಕಾಗಿದೆ.

ಶರಣರ ತತ್ವ-ಸಿದ್ಧಾಂತಗಳನ್ನು ಸರಿಯಾಗಿ ಪಾಲಿಸಿದರೆ, ಯಾವುದೇ ಕೋರ್ಟ್-ಕಛೇರಿಗಳು ಬೇಕಿಲ್ಲ. ಬಸವಣ್ಣ ನವರ ಕಾಯಕವೇ ಕೈಲಾಸ ಸಿದ್ಧಾಂತ ಪಾಲಿಸಿದರೆ, ಮೋಸ-ವಂಚನೆಗಳು ನಡೆಯುವುದಿಲ್ಲ. ಮತ್ತು ಪ್ರತಿಯೊಬ್ಬರ ಕೆಲಸ ಕಾರ್ಯಗಳು ಸುಗಮವಾಗಿ ಸಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರ ಜೀವನ ವೃತ್ತಾಂತ ಕುರಿತು ವಿ.ಸಿದ್ದರಾಮಣ್ಣ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹೆಚ್.ವಿಶ್ವನಾಥ, ತಾ.ಪಂ.ಅಧ್ಯಕ್ಷೆ ಜೆ.ನೀಲಮ್ಮ, ಹುಡಾ ಅಧ್ಯಕ್ಷ ವಿ.ವೆಂಕಟೇಶ್ವರ ರೆಡ್ಡಿ, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸಾಲಿ ಸಿದ್ದಯ್ಯಸ್ವಾಮಿ, ವೀರಶೈವ ಸಮಾಜದ ಅಧ್ಯಕ್ಷ ಕೆ.ಕೊಟ್ರೇಶ್, ಕಾರ್ಯದರ್ಶಿ ಕೋರಿಶೆಟ್ರ ಲಿಂಗಪ್ಪ, ಲಿಂಗಾಯತ ರೆಡ್ಡಿ ಸಮಾಜದ ಗೌರವಾಧ್ಯಕ್ಷ ಎಸ್.ತಿಮ್ಮಪ್ಪ, ಅಧ್ಯಕ್ಷ ಕೆ.ಬಿ.ಶ್ರೀನಿವಾಸ ರೆಡ್ಡಿ, ಉಪಾಧ್ಯಕ್ಷ ಎಂ.ಅನ್ನದಾನ ರೆಡ್ಡಿ, ಕಾರ್ಯದರ್ಶಿ ಎನ್.ಮಲ್ಲಿಕಾರ್ಜುನ ಮೆಟ್ರಿ, ಖಜಾಂಚಿ ಯು.ಪಂಪಾಪತಿ, ಉಪತಹಸೀಲ್ದಾರ್ ಎಂ.ರೇಣುಕಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ವೀರಭದ್ರಯ್ಯ, ಕಾರ್ಮಿಕ ನಿರೀಕ್ಷಕ ರವಿದಾಸ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಆರ್.ಎರ್ರಿಸ್ವಾಮಿ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಗೌಡ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಕನ್ನಾರಿ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮನ್ಸೂರು ಅಹಮದ್, ಸೇರಿದಂತೆ ಸಮಾಜದ ಮುಖಂಡರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮ.ಬ.ಸೋಮಣ್ಣ ನಿರ್ವಹಿಸಿದರು