ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಮಾವೇಶ

278

ಬಳ್ಳಾರಿ/ಹೊಸಪೇಟೆ: ಜಿಲ್ಲೆಯ ಕೂಡ್ಲಿಗಿಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪದಾಧಿಕಾರಿಗಳ ಸಮಾವೇಶ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಸಂಘದ ರಾಜ್ಯಾಧ್ಯಕ್ಷ ಹೆಚ್.ಮಂಜುನಾಥ್, ರೈತರ ಸಾಲ ಮನ್ನಾ, ಬೆಳೆ ವಿಮೆ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿ ಎ.ಪಿ.ಎಂ.ಸಿ.ಗಳಲ್ಲಿನ ಸಮಸ್ಯೆಗಳು, ಭದ್ರಾ ಮೇಲ್ದಂಡೆ ಯೋಜನೆ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಪಟ್ಟಾ ನೀಡಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ರೈತರು, ಮುಂದಾಗಲಿದ್ದಾರೆ ಎಂದು ಎಚ್ಚರಿಸಿದರು.

ಉಪಾಧ್ಯಕ್ಷ ಬಾಬುನಾಯ್ಕ,ಪ್ರಧಾನ ಕಾರ್ಯದರ್ಶಿ ಕೆ.ಪರಶುರಾಮ, ಜಿಲ್ಲಾ ಉಪಾಧ್ಯಕ್ಷ ಕಾಳಿದಾಸ ಸೇರಿದಂತೆ ಜಿಲ್ಲೆಯ ವಿವಿಧದ ತಾಲ್ಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ನೂರಕ್ಕೂ ಹೆಚ್ಚು ರೈತ ಮುಖಂಡರು ಭಾಗವಹಿಸಿದ್ದರು. ಹಸಿರು ಸೇನೆ ಮುಖಂಡ ಎನ್.ವೆಂಕಟೇಶ ನಿರೂಪಣೆ ಮಾಡಿದರು.ಎಂ.ಪ್ರಕಾಶ ಸ್ವಾಗತಿಸಿದರು.