ಗಾಂಜಾಮಾರಾಟಗಾರ ಅಂದರ್

245

ಬೆಂಗಳೂರು/ಮಹದೇವಪುರ:- ವೈಟ್ಫಿಲ್ಡ್ ಸುತ್ತಮುತ್ತಲ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಟೆಕ್ಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕುಖ್ಯಾತ ಗಾಂಜಾ ಮಾರಾಟಗಾರನನ್ನು ಬಂದಿಸುವಲ್ಲಿ ವೈಟ್ಫೀಲ್ಡ್ ಪೊಲೀಸರು ಯಶಸ್ವಿಯಾಗಿದ್ದಾರೆ. , ಬಂದಿತನಿಂದ 4 ಕೆ.ಜಿ 200 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ.

ಸೈಯ್ಯದ್ ಗೌಸ್(52) ಬಂದಿತ ಅರೋಪಿ. ಈತ ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಕಾವೇರಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ವೈಟ್ಪೀಲ್ಡ್ ಸುತ್ತಮುತ್ತಲ ಪ್ರದೇಶಗಳಲ್ಲಿನ ಕಾಲೇಜು ವಿದ್ಯಾರ್ಥಿಗಳು, ಅಪಾರ್ಟ್ ಮೆಂಟ್ ನಿವಾಸಿಗಳು ಹಾಗೂ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ವೈಟ್ಪೀಲ್ಡ್ ವಿಭಾಗದ ಡಿಸಿಪಿ ನಾರಾಯಣ್ ನೇತೃತ್ವದಲ್ಲಿ ವೈಟ್ಫಿಲ್ಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ, ಪಿಎಸ್ಐ ಸೋಮಶೇಖರ್, ಸಿಬ್ಬಂದಿ ರಾಜಗೋಪಾಲ್, ಮುನಿರಾಜು, ಕವಿತ ರವರು ಅರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಒಳಪಡಿಸಿದ್ದಾರೆ.