ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

284

ಚಿಕ್ಕಬಳ್ಳಾಪುರ/ಗುಡಿಬಂಡೆ: ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ತಾ.ಪಂ. ಕೆಡಿಪಿ ನಾಮಿನಿ ಸದಸ್ಯ ಕೃಷ್ಣೇಗೌಡ ತಿಳಿಸಿದರು.
ಪಟ್ಟಣದ ತೋಟಗಾರಿಕೆ ಇಲಾಖೆಯಲ್ಲಿ ನಡೆದ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆಯನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಭಾಗದ ರೈತರಿಗೆ ಸರ್ಕಾರದ ವತಿಯಿಂದ ಅನೇಕ ಸೌಲಭ್ಯಗಳು ದೊರೆಯಿತ್ತಿವೆ. ಅವುಗಳನ್ನು ಅರ್ಹ ಫಲಾನುಭವಿಗಳು ಪಡೆದುಕೊಂಡು ಆರ್ಥಿಕವಾಗಿ ಸದೃಢವಾಗಬೇಕು. ಯಾವುದೇ ಮಧ್ಯವರ್ತಿಗಳ ಹಾವಳಿಗೆ ಒಳಗಾಗದೇ ನೇರವಾಗಿ ಇಲಾಖೆಯಲ್ಲಿ ಬಂದು ತಮಗೆ ಬೇಕಾದ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿ ಭಾಗ್ಯ ಯೋಜನೆ, ಪ್ಯಾಕ್ ಹೌಸ್, ಪಾಲಿಹೌಸ್ ಯೋಜನೆಗೆ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಈ ವೇಳೆ ತೋಟಗಾರಿಕೆ ಸಹಾಯಕ ನಿರ್ದೇಶಕಿ ಗಾಯತ್ರಿ, ಸಿಬ್ಬದಿಯಾದ ಪ್ರಸಾದ್, ಹನುಮಂತಪ್ಪ ಸೇರಿದಂತೆ ಹಲವರು ಇದ್ದರು.