ಹೋರಾಟಗಾರನಿಗೆ ಅಂತಿಮ ನಮನ

440

ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ: ತಾಲ್ಲೂಕು ಡಾ. ರಾಜ್ ಕುಮಾರ್ ಸಂಘದ ಅಧ್ಯಕ್ಷ ಹಾ.ರಾಮಕೃಷ್ಣ ಇತ್ತೀಚೆಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಅವರಿಗೆ ತಾಲೂಕಿನ ಕನ್ನಡಪರ ,ಪ್ರಗತಿಪರ ಸಂಘಟನೆಗಳಿಂದ ನಗರದ ಕನ್ನಡ ಜಾಗೃತ ಭವನದಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಕೆಎಂ.ಹನುಮಂತರಾಯಪ್ಪ, ಶಾಸಕ ಟಿ,ವೆಂಕಟರಮಣಯ್ಯ, ನಗರಸಭಾ ಸದಸ್ಯ ತ.ನ.ಪ್ರಭುದೇವ್, ಕನ್ನಡ ಪಕ್ಷದ ಸಂಜೀವ್ ನಾಯಕ್ ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಮೀಳಾ ಮಹದೇವ್ ಸೇರಿದಂತೆ ತಾಲೂಕಿನ ಅನೇಕ ಮುಖಂಡರು ಭಾಗವಹಿಸಿ ಅಗಳಿದ ಹೋರಾಟಗಾರರ ಬಗ್ಗೆ ತಮ್ಮ ಅನಿಸಿಕೆಗಳನ್ನು ಪ್ರಸ್ತಾಪಿಸಿದರು.